ವಚನ - 135     
 
ಕಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ? ಸುಟ್ಟ ಮಡಕೆ ಮುನ್ನಿನಂತೆ ಮರಳಿ ಧರೆಯನಪ್ಪಬಲ್ಲುದೆ? ತೊಟ್ಟ ಬಿಟ್ಟು ಬಿದ್ದ ಹಣ್ಣು ಮರಳಿ ತೊಟ್ಟನಪ್ಪಬಲ್ಲುದೆ? ಕಷ್ಟಕರ್ಮಿ ಮನುಜರು ಕಾಣದೆ ಒಂದ ನುಡಿದಡೆ, ನಿಷ್ಠೆಯುಳ್ಳ ಶರಣರು ಮರಳಿ ಮರ್ತ್ಯಕ್ಕೆ ಬಪ್ಪರೆ ಚೆನ್ನಮಲ್ಲಿಕಾರ್ಜುನಾ.?