ವಚನ - 139     
 
ಕದಳಿ ಎಂಬುದು ತನು, ಕದಳಿ ಎಂಬುದು ಮನ, ಕದಳಿ ಎಂಬುದು ವಿಷಯಂಗಳು. ಕದಳಿ ಎಂಬುದು ಭವಘೋರಾರಣ್ಯ. ಈ ಕದಳಿ ಎಂಬುದ ಗೆದ್ದು ತವೆ ಬದುಕಿ ಬಂದು ಕದಳಿಯ ಬನದಲ್ಲಿ ಭವಹರನ ಕಂಡೆನು. ಭವ ಗೆದ್ದು ಬಂದ ಮಗಳೆಂದು ಕರುಣದಿ ತೆಗೆದು ಬಿಗಿಯಪ್ಪಿದಡೆ ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು.