ವಚನ - 180     
 
ಕೊಳಲ ದನಿಗೆ ಸರ್ಪ ತಲೆದೂಗಿದಡೇನು, ಒಳಗಣ ವಿಷದ ಬಯಕೆ ಬಿಡದನ್ನಕ್ಕ? ಹಾಡಿದಡೇನು, ಕೇಳಿದಡೇನು, ತನ್ನಲುಳ್ಳ ಅವಗುಣ ಬಿಡದನ್ನಕ್ಕ? ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.