ವಚನ - 190     
 
ಗಿರಿಯೊಳು ವನದೊಳು ಗಿಡಗಿಡದತ್ತ ದೇವ, ಎನ್ನದೇವ, ಬಾರಯ್ಯಾ, ತೋರಯ್ಯಾ ನಿಮ್ಮ ಕರುಣವನೆಂದು, ನಾನು ಅರಸುತ್ತ ಅಳಲುತ್ತ ಕಾಣದೆ ಸುಯಿದು ಬಂದು ಕಂಡೆ. ಶರಣರ ಸಂಗದಿಂದ ಅರಸಿ ಹಿಡಿದಿಹೆನಿಂದು- ನೀನಡಗುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನಾ?