ವಚನ - 196     
 
ಗುರುವೆ ತೆತ್ತಿಗನಾದ, ಲಿಂಗವೆ ಮದುವಣಿಗನಾದ, ನಾನೆ ಮದುವಳಿಗೆಯಾದೆನು. ಈ ಭುವನವೆಲ್ಲರಿಯಲು ಅಸಂಖ್ಯಾತರೆನಗೆ ತಾಯಿತಂದೆಗಳು. ಕೊಟ್ಟರು ಸಾದೃಶ್ಯವಪ್ಪ ವರನ ನೋಡಿ. ಇದು ಕಾರಣ, ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ. ಮಿಕ್ಕಿನ ಲೋಕದವರೆನಗೆ ಸಂಬಂಧವಿಲ್ಲವಯ್ಯಾ ಪ್ರಭುವೆ.