ವಚನ - 231     
 
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೆ ಸುತ್ತಿ ಸಾವಂತೆ, ಮನ ಬಂದುದನು ಬಯಸಿ ಬೇವುತ್ತಿದ್ದೇನಯ್ಯಾ. ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ ಚೆನ್ನಮಲ್ಲಿಕಾರ್ಜುನಾ.