ವಚನ - 232     
 
ಇಹಕ್ಕೊಬ್ಬ ಗಂಡನೆ? ಪರಕ್ಕೊಬ್ಬ ಗಂಡನೆ? ಲೌಕಿಕಕ್ಕೊಬ್ಬ ಗಂಡನೆ? ಪಾರಮಾರ್ಥಕ್ಕೊಬ್ಬ ಗಂಡನೆ? ಎನ್ನ ಗಂಡ ಚೆನ್ನಮಲ್ಲಿಕಾರ್ಜುನದೇವರಲ್ಲದೆ ಮಿಕ್ಕಿನ ಗಂಡರೆಲ್ಲ ಮುಗಿಲಮರೆಯ ಬೊಂಬೆಯಂತೆ.