ವಚನ - 234     
 
ದೇವಲೋಕದವರಿಗೂ ಬಸವಣ್ಣನೆ ದೇವರು. ಮರ್ತ್ಯಲೋಕದವರಿಗೂ ಬಸವಣ್ಣನೆ ದೇವರು. ನಾಗಲೋಕದವರಿಗೂ ಬಸವಣ್ಣನೆ ದೇವರು. ಮೇರುಗಿರಿ ಮಂದರಗಿರಿ ಮೊದಲಾದವೆಲ್ಲಕ್ಕೂ ಬಸವಣ್ಣನೆ ದೇವರು. ಚೆನ್ನಮಲ್ಲಿಕಾರ್ಜುನಯ್ಯಾ,ನಿಮಗೂ ಎನಗೂ ನಿಮ್ಮ ಶರಣರಿಗೂ ಬಸವಣ್ಣನೆ ದೇವರು.