ವಚನ - 243     
 
ನಡೆಶುಚಿ, ನುಡಿಶುಚಿ, ತನುಶುಚಿ, ಮನಶುಚಿ, ಭಾವಶುಚಿ. ಇಂತೀ ಪಂಚ ತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.