ವಚನ - 246     
 
ನಾಣಮರೆಯ ನೂಲು ಸಡಿಲಲು ನಾಚುವರು ನೋಡಾ ಗಂಡು ಹೆಣ್ಣೆಂಬ ಜಾತಿಗಳು. ಪ್ರಾಣದೊಡೆಯ ಜಗದೊಳಗೆ ಮುಳುಗಲು ತೆರಹಿಲ್ಲದಿರಲು ದೇವರ ಮುಂದೆ ನಾಚಲೆಡೆಯುಂಟೆ? ಚೆನ್ನಮಲ್ಲಿಕಾರ್ಜುನ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮರಸುವ ಠಾವಾವುದು ಹೇಳಯ್ಯಾ.?