ವಚನ - 261     
 
ನೀನಿಕ್ಕಿದ ದಸರಿದೊಡಕನಾರು ಬಿಡಿಸಬಲ್ಲರಯ್ಯಾ? ನೀನಿಕ್ಕಿದ ಕಟ್ಟನಾರು ಕಳೆಯಬಲ್ಲರಯ್ಯಾ? ನೀ ಸೀಳಿದ ರೇಖೆಯನಾರು ಮೀರಬಹುದಯ್ಯಾ? ಚೆನ್ನಮಲ್ಲಿಕಾರ್ಜುನಯ್ಯಾ, ನೀನು ಕಳುಹಿದ ಸೆರೆಗೆ ಮಾರುವೋಗದಿರ್ದಡೆ ಎನ್ನಿಚ್ಚೆಯ ಅಯ್ಯಾ.?