ವಚನ - 280     
 
ಪ್ರಾಣ ಲಿಂಗವೆಂದರಿದಬಳಿಕ.ಪ್ರಾಣ ಪ್ರಸಾದವಾಯಿತ್ತು. ಲಿಂಗ ಪ್ರಾಣವೆಂದರಿದಬಳಿಕ,ಅಂಗದಾಸೆ ಹಿಂಗಿತ್ತು. ಲಿಂಗ ಸೋಂಕಿನ ಸಂಗಿಗೆ, ಕಂಗಳೆ ಕರುವಾದವಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ಹಿಂಗದೆ ಅನಿಮಿಷನಾಗಿಹ ಶರಣಂಗೆ.