ವಚನ - 281     
 
ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ? ದೇವ ದಾನವ ಮಾನವರೆಲ್ಲಾ ಜೋಳವಾಳಿಯಲೈದಾರೆ. ಜಾಣಕಲುಕುಟಿಗನನಗಲದೆ ಹೂವನೆ ಕೊಯ್ದು, ಕಲಿಯುಗದ ಕರಸ್ಥಲದೇವಪೂಜೆ ಘನ. ಮೇರುವಿನ ಕುದುರೆ ನಲಿದಾಡಲದುಬುತ. ಜಾರಜಂಗುಳಿಗಳ ಜಗಳ ಮೇಳಾಪ, ಮರುಪತ್ತದ ಮಾತು, ನಗೆ ಹಗರಣ! ಕ್ಷೀರಸಾಗರದಲ್ಲಿ ದಾರಿಯಳವಡದಯ್ಯಾ. ನೀ ಹೇಳಬೇಕು, ಭಕ್ತರೆಂತಿಪ್ಪರೊ? ಪಂಚವರ್ಣದ ಬಣ್ಣ ಸಂತೆಯ ಪರದಾಟವು ಚೆನ್ನಮಲ್ಲಿಕಾರ್ಜುನಯ್ಯಾ, ತ್ರಿಭುವನದ ಹೆಂಡಿರ ನೀರಹೊಳೆಯಲ್ಲಿರಿಸಿತ್ತು.