ವಚನ - 284     
 
ಫಲ ಒಳಗೆ ಪಕ್ವವಾಗಿಯಲ್ಲದೆ, ಹೊರಗಳ ಸಿಪ್ಪೆ ಒಪ್ಪಗೆಡದು. ಕಾಮನ ಮುದ್ರೆಯ ಕಂಡು ನಿಮಗೆ ನೋವಾದಿಹಿತೆಂದು ಆ ಭಾವದಿಂದ ಮುಚ್ಚಿದೆ. ಇದಕ್ಕೆ ನೋವೇಕೆ? ಕಾಡದಿರಣ್ಣಾ, ಚೆನ್ನಮಲ್ಲಿಕಾರ್ಜುನದೇವರದೇವನ ಒಳಗಾದವಳ.