ವಚನ - 287     
 
ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ. ಅಣ್ಣಾ, ನಾನು ಹೆಂಗೂಸಲ್ಲ; ಅಣ್ಣಾ, ನಾನು ಸೂಳೆಯಲ್ಲ. ಅಣ್ಣಾ, ಮತ್ತೆ ನನ್ನ ಕಂಡು ಕಂಡು ಆರೆಂದು ಬಂದಿರಣ್ಣಾ? ಚೆನ್ನಮಲ್ಲಿಕಾರ್ಜುನನಲ್ಲದ ಮಿಕ್ಕಿನ ಪರಪುರುಷನು ನಮಗಾಗದ ಮೋರೆ ನೋಡಣ್ಣಾ!