ವಚನ - 322     
 
ಮನೆ ಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ; ಬೇಡಿದಡೆ ಇಕ್ಕದಂತೆ ಮಾಡಯ್ಯ; ಇಕ್ಕಿದಡೆ ನೆಲಕ್ಕೆ ಬೀಳುವಂತೆ ಮಾಡಯ್ಯ; ನೆಲಕ್ಕೆ ಬಿದ್ದಡೆ ನಾನೆತ್ತಿಕೊಂಬುದಕ್ಕೆ ಮುನ್ನವೆ ಶುನಿ ಯೆತ್ತಿಕೊಂಬಂತೆ ಮಾಡಾ ಚೆನ್ನಮಲ್ಲಿಕಾರ್ಜುನಯ್ಯ.