ವಚನ - 325     
 
ಮರವಿದ್ದು ಫಲವೇನು ನೆಳಲಿಲ್ಲದನ್ನಕ್ಕ? ಧನವಿದ್ದು ಫಲವೇನು ದಯವಿಲ್ಲದನ್ನಕ್ಕ? ಹಸುವಿದ್ದು ಫಲವೇನು ಹಯನಿಲ್ಲದನ್ನಕ್ಕ? ರೂಪಿದ್ದು ಫಲವೇನು ಗುಣವಿಲ್ಲದನ್ನಕ್ಕ? ಅಗಲಿದ್ದು ಫಲವೇನು ಬಾನವಿಲ್ಲದನ್ನಕ್ಕ? ನಾನಿದ್ದು ಫಲವೇನು ನಿಮ್ಮ ಜ್ಞಾನವಿಲ್ಲದನ್ನಕ್ಕ ಚೆನ್ನಮಲ್ಲಿಕಾರ್ಜುನಾ.