ವಚನ - 344     
 
ರತ್ನದ ಸಂಕೋಲೆಯಾದಡೆ ತೊಡರಲ್ಲವೆ? ಮುತ್ತಿನ ಬಲೆಯಾದಡೆ ಬಂಧನವಲ್ಲವೆ? ಚಿನ್ನದ ಕತ್ತಿಯಲ್ಲಿ ತಲೆಹೊಯ್ದಡೆ ಸಾಯದಿರ್ಪರೆ? ಲೋಕದ ಭಜನೆಯ ಭಕ್ತಿಯಲ್ಲಿ ಸಿಲುಕಿದಡೆ ಜನನಮರಣ ಬಿಡುವುದೆ ಚೆನ್ನಮಲ್ಲಿಕಾರ್ಜುನಾ?