ವಚನ - 394     
 
ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆಲುವಂಗೆ ನಾನೊಲಿದೆ. ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗೆ ನಾನೊಲಿದೆ ಎಲೆ ಅವ್ವಗಳಿರಾ. ಭವವಿಲ್ಲವ ಭಯವಿಲ್ಲದ ನಿರ್ಭಯ ಚೆಲುವಂಗೊಲಿದೆ ನಾನು. ಸೀಮೆಯಿಲ್ಲದ ನಿಸ್ಸೀಮಂಗೊಲಿದೆ ನಾನು. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆ ಮಿಗೆ ಮಿಗೆ ಒಲಿದೆ ಎಲೆ ಅವ್ವಗಳಿರಾ.