ವಚನ - 405     
 
ಹಗಲೆನ್ನೆ ಇರುಳೆನ್ನೆ ಉದಯವೆನ್ನೆ ಅಸ್ತಮಾನವೆನ್ನೆ; ಹಿಂದೆನ್ನೆ ಮುಂದೆನ್ನೆ, ನೀನಲ್ಲದೆ ಪೆರತೊಂದಹುದೆನ್ನೆ. ಮನ ಘನವಾದುದಿಲ್ಲವಯ್ಯಾ. ಕತ್ತಲೆಯಲ್ಲಿ ಕನ್ನಡಿಯ ನೋಡಿ ಕಳವಳಗೊಂಡೆನಯ್ಯಾ. ನಿಮ್ಮ ಶರಣ ಬಸವಣ್ಣನ ತೇಜದೊಳಗಲ್ಲದೆ ಆನಿನ್ನೆಂದು ಕಾಂಬೆನು ಹೇಳಾ, ಚೆನ್ನಮಲ್ಲಿಕಾರ್ಜುನಾ?