ವಚನ - 408     
 
ಹರಿಯ ನುಂಗಿತ್ತು ಮಾಯೆ, ಅಜನ ನುಂಗಿತ್ತು ಮಾಯೆ; ಇಂದ್ರನ ನುಂಗಿತ್ತು ಮಾಯೆ, ಚಂದ್ರನ ನುಂಗಿತ್ತು ಮಾಯೆ ಬಲ್ಲೆನೆಂಬ ಬಲುಗೈಯರ ನುಂಗಿತ್ತು ಮಾಯೆ ಅರಿಯೆನೆಂಬ ಅಜ್ಞಾನಿಗಳ ನುಂಗಿತ್ತು ಮಾಯೆ ಈರೇಳು ಭುವನವನಾರಡಿಗೊಂಡಿತ್ತು ಮಾಯೆ ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಮಾಯವ ಮಾಣಿಸಾ ಕರುಣಿ.