Index   ವಚನ - 2    Search  
 
ಎನಗೆ ಗುರುಸ್ಥಲವ ತೋರಿದಾತ ಸಂಗನ ಬಸವಣ್ಣನು. ಎನಗೆ ಲಿಂಗಸ್ಥಲವ ತೋರಿದಾತ ಚನ್ನಬಸವಣ್ಣನು. ಎನಗೆ ಜಂಗಮಸ್ಥಲವ ತೋರಿದಾತ ಸಿದ್ಧರಾಮಯ್ಯನು. ಎನಗೆ ಪ್ರಸಾದಿಸ್ಥಲವ ತೋರಿದಾತ ಬಿಬ್ಬಬಾಚಯ್ಯನು. ಎನಗೆ ಪ್ರಾಣಲಿಂಗಿಸ್ಥಲವ ತೋರಿದಾತ ಚಂದಯ್ಯನು. ಎನಗೆ ಶರಣಸ್ಥಲವ ತೋರಿದಾತ ಸೊಡ್ಡಳ ಬಾಚರಸನು. ಎನಗೆ ಐಕ್ಯಸ್ಥಲವ ತೋರಿದಾತ ಅಜಗಣ್ಣನು. ಎನಗೆ ನಿಜಸ್ಥಲವ ತೋರಿದಾತ ಪ್ರಭುದೇವರು. ಇಂತೀ ಸ್ಥಲಗಳ ಕಂಡು ಏಳ್ನೂರೆಪ್ಪತ್ತು ಅಮರಗಣಂಗಳ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ! ಅಭಿನವ ಮಲ್ಲಿಕಾರ್ಜುನಾ.