Index   ವಚನ - 5    Search  
 
ನೆನೆಯಲರಿಯೆ ನಿರ್ಧರಿಸಲರಿಯೆ ಮನವಿಲ್ಲವಾಗಿ. ಭಾವಿಸಲರಿಯೆ ಬೆರಸಲರಿಯೆ ಭಾವ ನಿರ್ಭಾವವಾಯಿತ್ತಾಗಿ. ಧ್ಯಾನ ಮೌನವನರಿಯೆ ಧ್ಯಾನಾತೀತ ತಾನೆಯಾಯಿತ್ತಾಗಿ. ಜ್ಞಾತೃ ಜ್ಞಾನ ಜ್ಞೇಯಂಗಳೆಲ್ಲವ ಮೀರಿ ಅಭಿನವ ಮಲ್ಲಿಕಾರ್ಜುನನಲ್ಲಿ ಪರಮ ಸುಖಿಯಾಗಿರ್ದೆ.