Index   ವಚನ - 18    Search  
 
ಕೋಲೊಂದರಲ್ಲಿ ಹಲವು ಕುಲದ ಗೋವುಗಳ ಚಲಿಸದೆ ನಿಲಿಸುವಂತೆ ಏಕಚಿತ್ತನಾಗಿ ಸರ್ವವಿಕಾರಂಗಳ ಕಟ್ಟುವಡೆದು, ಇಂದ್ರಿಯಂಗಳ ಇಚ್ಛೆಯಲ್ಲಿ ತ್ರಿವಿಧವ ಹಿಡಿದಿರುವರ ಸಂದಿಯಲ್ಲಿ ನುಸುಳದೆ ವಸ್ತುವಿನ ಅಂಗದಲ್ಲಿಯೆ ತನ್ನಂಗ ತಲ್ಲೀನವಾಗಿಪ್ಪುದೆ ಮಹಾ ನಿಜದ ನೆಲೆ. ಗೋಪತಿನಾಥ ವಿಶ್ವೇಶ್ವರಲಿಂಗವನರಿವುದಕ್ಕೆ ಇದೆ ಬಟ್ಟೆ.