Index   ವಚನ - 22    Search  
 
ತತ್ವಂಗಳ ಗೊತ್ತ ಗುಟ್ಟೆಂದು ಬಿಡಬಾರದು ಇಷ್ಟಲಿಂಗದ ಪೂಜೆಯ ಆತ್ಮನ ಗೊತ್ತನರಿತೆನೆಂದು ಮರೆಯಲಾಗದು. ಪಾಪ ಪುಣ್ಯವಿಲ್ಲಾ ಎಂದು ನೀಕರಿಸಿ ನಡೆಯಲಾಗದು. ಈ ಗುಣ ಅಂಗವನರಿವನ್ನಕ್ಕ ಒಂದೂ ಇಲ್ಲಾ ಎಂದು ಬಿಡಬಹುದೆ? ನಾನೆಂಬುದ ಇದೇನೆಂದು ಅರಿವನ್ನಕ್ಕ ಶ್ರುತಕ್ಕೆ ದೃಷ್ಟ, ದೃಷ್ಟಕ್ಕೆ ಅನುಮಾನ, ಅನುಮಾನಕ್ಕೆ ನಿಶ್ಚಯ. ನಿಶ್ಚಯ ನಿಜವಾದಲ್ಲಿ, ಗೋಪತಿನಾಥ ವಿಶ್ವೇಶ್ವರಲಿಂಗನ ಕ್ರಿಯಾನಿರ್ವಾಹ.