Index   ವಚನ - 35    Search  
 
ಶಾಸ್ತ್ರ ಪ್ರಮಾಣವೆಂಬ ಬೆಟ್ಟದಲ್ಲಿ ವಾಚಾರಚನೆಯೆಂಬ ಹುಲಿ ಹುಟ್ಟಿ, ಅರಿದೆನೆಂಬ ಹಿರಿದಪ್ಪ ಬೆಟ್ಟದಲ್ಲಿ ಗೆಲ್ಲ ಸೋಲವೆಂಬ ಮತ್ತಗಜ ಹುಟ್ಟಿ, ಮೊನೆ ಮುಂಬರಿದು ಹರಿದ ಬೆಟ್ಟದಲ್ಲಿ ಪರಿಭ್ರಮಣದ ತೋಳ ಹುಟ್ಟಿ, ಹುಲಿ ಹುಲ್ಲೆಯ ಕೋಡಿನಲ್ಲಿ ಸತ್ತು ಗಜ ಅಜದ ಮೆಲುಕಿನಲ್ಲಿ ಸಿಕ್ಕಿ, ತೋಳ ಉಡುವಿನ ಕಣ್ಣಿನೊಳಡಗಿತ್ತು. ತುರುವಿನ ಮಂದೆ ಬರಿಕೆಯಿವುತ್ತಿದೆ ಗೋಪತಿನಾಥ ವಿಶ್ವೇಶ್ವರಲಿಂಗವನರಿತೆಹೆನೆಂದು.