Index   ವಚನ - 46    Search  
 
ಹಸುವಿಗೆ ಹಾಗ, ಎತ್ತಿಗೆ ಹಣವಡ್ಡ, ಕರುವಿಗೆ ಮೂರು ಹಣ, ಎಮ್ಮೆ ಕೋಣ ಕುಲವ ನಾ ಕಾಯಲಿಲ್ಲ. ಅವು ಎನ್ನ ತುರುವಿಗೆ ಹೊರಗು. ತೊಂಡು ಹೋಗದಂತೆ ಕಾದೊಪ್ಪಿಸುವೆ ಗೋಪತಿನಾಥ ವಿಶ್ವೇಶ್ವರಲಿಂಗಕ್ಕೆ.