Index   ವಚನ - 45    Search  
 
ವೇದಾಂತ ಸಿದ್ಧಾಂತವಪ್ಪ ತರ್ಕಮರ್ಕಟ ವಿಧಿಯ ದರ್ಶನವಾದಿಗಳ ಪರಿವರ್ತನೆಯಲ್ಲ; ಶರಣನ ವರ್ತನೆ ಬೇರೆ. ವೀರಶೈವ ಸಿದ್ಧಾಂತ ನಿರ್ಣಯ ನಿಜಭಕ್ತಿ. ನಿಜ ಶಿವಜ್ಞಾನ, ಪರಮ ವೈರಾಗ್ಯವನುಳ್ಳ ಸರ್ವಾಚಾರ ಸಂಪನ್ನ ಶರಣ. ಲಿಂಗಾತ್ಮಕ, ಲಿಂಗೇಂದ್ರಿಯ, ಲಿಂಗಾಂಗಸಂಗಿ, ಘನಲಿಂಗಯೋಗಿ. ಪ್ರಾಣಮುಕ್ತ, ಮನೋಮುಕ್ತ, ಶರೀರಮುಕ್ತ. ಅನಾದಿ ಕೇವಲ ಮುಕ್ತರಯ್ಯಾ ನಿಮ್ಮ ಶರಣರು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.