Index   ವಚನ - 52    Search  
 
ಚಿನ್ನದಿಂದಾದ ಬಂಗಾರ ಚಿನ್ನದ ರೂಪಲ್ಲದೆ ಮತ್ತೊಂದು ರೂಪಾಗಬಲ್ಲುದೆ ಹೇಳಾ? ಲಿಂಗಮುಖದಿಂದ ಉದಯವಾದ ಶರಣರುಲಿಂಗದ ರೂಪಲ್ಲದೆ, ಮತ್ತೊಂದು ರೂಪೆಂದೆನಬಹುದೇ? ಎನಲಾಗದು ನೋಡಾ. ಶಿವನ ಅಂಶವಾದ ಶರಣರಿಗೆ ಮಲಿನಭಾವ ಕಲ್ಪಿಸುವ ಮಹಾಪಾತಕರಿಗೆ ನಾಯಕನರಕ ತಪ್ಪದು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.