Index   ವಚನ - 68    Search  
 
ಶಿವನೂ ಉಂಟು, ಆತ್ಮನೂ ಉಂಟು, ಮಾಯೆಯೂ ಉಂಟು ಎಂಬೆ ಎಲೆ ಮರುಳು ಮಾನವ. ಆತ್ಮನನಾದಿಯೋ, ಮಾಯೆಯನಾದಿಯೋ, ಶಿವನನಾದಿಯೋ? ಈ ಮೂರೂ ಅನಾದಿಯಲ್ಲಿ ಉಂಟಾದರೆ, ಆದಿಯೆಂದಡೆ ದೇಹ, ಅನಾದಿಯೆಂದೆಡೆ ಆತ್ಮನು. ದೇಹವೂ ಆತ್ಮನೂ ಮಾಯೆಯೂ ಈ ಮೂರೂ ಇಲ್ಲದಂದು ನಿತ್ಯನಿರಂಜನ ಪರಶಿವತತ್ವವೊಂದೇ ಇದ್ದಿತ್ತೆಂಬುದು ಯಥಾರ್ಥವಲ್ಲದೆ, ಉಳಿದವೆಲ್ಲ ಹುಸಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.