Index   ವಚನ - 80    Search  
 
ದೇಹವ ಮರೆಗೊಂಡಿಪ್ಪ ಆತ್ಮನಂತೆ, ಶಕ್ತಿಯ ಮರೆಗೊಂಡಿಪ್ಪ ಶಿವನಂತೆ, ಕ್ಷೀರವ ಮರೆಗೊಂಡಿಪ್ಪ ತುಪ್ಪದಂತೆ, ವಾಚ್ಯವ ಮರೆಗೊಂಡಿಪ್ಪ ಅನಿರ್ವಾಚ್ಯದಂತೆ, ಲೋಕಾರ್ಥದೊಳಡಗಿಪ್ಪ ಪರಮಾರ್ಥದಂತೆ, ಎನ್ನ ಆತ್ಮನೊಳಡಗಿಪ್ಪ ಪರಮಾರ್ಥ ತತ್ವವು, ಬೀಜದೊಳಡಗಿದ ವೃಕ್ಷದಂತೆ ಇದ್ದಿತಯ್ಯ. ನಾನರಿಯದ ಮುನ್ನ ಎನ್ನೊಳಡಗಿದ್ದಿತಯ್ಯ ಶರಣ ಲಿಂಗ ಸಂಬಂಧ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.