Index   ವಚನ - 88    Search  
 
ಆತ್ಮದೃಕ್ಕಿಂದ ಈಶ್ವರನ ತಿಳಿದಲ್ಲದೆ, ಜಾತಿಸ್ಮರತ್ವವ ಕಾಣಬಾರದು; ಜ್ಯೋತಿರ್ಮಯ ಲಿಂಗದಿಂದೊಗೆದ ಶರಣನ, ಏತರಿಂದ ಕಂಡು ಹೇಳುವಿರಣ್ಣ? ಮಾತಿನಿಂದ ಹೇಳಿಹೆನೆಂದಡೆ, ವಾಚಾತೀತ ಶಿವಶರಣನು. ವಾಙ್ಮನಕ್ಕಗೋಚರವಾದ ಮಹಾಘನ ಪರತತ್ವದಲುದಯವಾದ ಶರಣನ ಮಾತಿಗೆ ತಂದು ನುಡಿವ ಮರುಳು ಮಾನವರನೇನೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.