Index   ವಚನ - 109    Search  
 
ಶಶಿಮುಖಿಯರ ಸಂಗಕ್ಕೆ ಎಣಿಸುವ ಪಶುಪ್ರಾಣಿಗಳು ಪಶುಪತಿಯ ಸಂಗಸುಖಕ್ಕೆ ಯಾಕೆ ಎಣಿಸಲೊಲ್ಲರಯ್ಯ? ಶಿವ ಶಿವಾ! ನೀ ಮಾಡಿದ ವಿಷಯದ ವಿಧಿ, ಈರೇಳುಲೋಕವನಂಡಲೆವುತ್ತಿದೆ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.