Index   ವಚನ - 118    Search  
 
ಪಡುವ ಕಚ್ಚಿದ ನಾಯಿ ಒಡೆಯನ ಕುರುಹ ಬಲ್ಲುದೆ? ಹೊನ್ನು ಹೆಣ್ಣು ಮಣ್ಣ ಕಚ್ಚಿದ ಮನುಜರು ನಿಮ್ಮನೆತ್ತ ಬಲ್ಲರಯ್ಯ? ನಿಮ್ಮನರಿಯದ ಮನುಜರು ನಾಯಕುನ್ನಿಗಿಂತಲೂ ಕರಕಷ್ಟ ನೋಡಾ! ನಿತ್ಯವ ಹಿಡಿಯದೆ, ಅನಿತ್ಯವ ಹಿಡಿದು, ವ್ಯರ್ಥಕ್ಕೆ ಸತ್ತವರ ನೋಡಿ ಹೇಸಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.