Index   ವಚನ - 158    Search  
 
ಭವತಿಮಿರವೆಂಬ ಅಜ್ಞಾನದಿಂದ ಮುಸುಕಿಕೊಂಡು, ಕಾಣಬಾರದೆಯಿದ್ದ ಕಣ್ಣಿಂಗೆ ಜ್ಞಾನವೆಂಬ ಅಂಜನವನೆಚ್ಚು ಶಿವಪಥವಿದೆಂದು ತೋರಿಸಿದ ಸದ್ಗುರುದೇವಂಗೆ ನಮೋನಮೊಯೆಂಬೆನಯ್ಯ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.