Index   ವಚನ - 178    Search  
 
ಬಯಲ ಮೂರ್ತಿ ಮಾಡಿ, ಎನ್ನ ಕರಸ್ಥಲಕ್ಕೆ ಕೊಟ್ಟನಯ್ಯ ಶ್ರೀಗುರು. ಬಯಲಮೂರ್ತಿಯ ಅಮೂರ್ತಿಯ ಮಾಡಿ, ಎನ್ನ ಪ್ರಾಣದೊಳಗಿರಿಸಿದನಯ್ಯ ಶ್ರೀಗುರು. ಬಯಲು ಬಯಲನೆ ಬೆರಸಿ ಬಯಲೆಂದೆನಿಸಿ ಎನ್ನ ಭಾವದೊಳಗಿರಿಸಿದನಯ್ಯ ಶ್ರೀಗುರು. ಇದು ಕಾರಣ, ಎನ್ನ ಕರಸ್ಥಲ ಮನಸ್ಥಲ ಭಾವಸ್ಥಲದಲ್ಲಿ ನಿಮ್ಮಧರಿಸಿ ನಾನು ಅಂಗಲಿಂಗ ಸಂಬಂಧಿಯಾದೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.