Index   ವಚನ - 212    Search  
 
ಸದಾಚಾರದಲ್ಲಿ ನಡೆವವನ ಶಿವನಲ್ಲಿ ಭಕ್ತಿಯಾಗಿಪ್ಪವನ ಶಿವಲಾಂಛನವ ಕಂಡಲ್ಲಿ ವಂದನೆಗೈವುತಿಪ್ಪವನ ಲಿಂಗ ಜಂಗಮವ ಒಂದೇ ಭಾವದಲ್ಲಿ ಕಂಡು ಭೃತ್ಯಾಚಾರ ಸದಾಚಾರಯುಕ್ತನಾಗಿರಬಲ್ಲರೆ ಭಕ್ತನ ಸ್ಥಲವಿದೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.