Index   ವಚನ - 217    Search  
 
ಸುದತಿ ಪುತ್ರ ಮಿತ್ರ ಮಾತೃ ಪಿತರು ಹಿತರು ನಿತ್ಯರೆಂದು ಹದೆದು ಕುದಿದು ಕೋಟಲೆಗೊಂಬನ್ನಕ್ಕರ ಗುರುವೆಂದೆನೇ ಅಯ್ಯ. ಸುರಚಾಪದಂತೆ ತೋರಿ ಕೆಡುವ ಹೆಣ್ಣು ಹೊನ್ನು ಮಣ್ಣ ನಚ್ಚಿ ಮದಡನಾಗಿಪ್ಪನ್ನಕ್ಕರ ಲಿಂಗವೆಂದೆನೇ ಅಯ್ಯ. ಈ ಕಷ್ಟಸಂಸೃತಿಯ ಕೂಪತಾಪದೊಳಗೆ ಬಿದ್ದುರುಳುವ ನಾಮನಷ್ಟರಿಗೆ ಜಂಗಮಲಿಂಗವೆಂದೆನೇ ಅಯ್ಯ. ಈ ದುಷ್ಟದುರ್ಮಲತ್ರಯದ ಅಂಧಕಾರ ಘೋರತರವಿಕಾರ ಸರ್ಪ ದಷ್ಟರಾದ ದುಷ್ಟರಿಗೆ ಶಿವಸತ್ವಥವೆಂದೆನೆ. ಹೇಳ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.