Index   ವಚನ - 233    Search  
 
ವಿಶ್ವಾಸದಿಂದ ಅಂಗನೆಯ ಕುಚ, ಲಿಂಗವಾದುದಿಲ್ಲವೆ? ವಿಶ್ವಾಸದಿಂದ ಬಳ್ಳ ಲಿಂಗವಾದುದಿಲ್ಲವೆ? ವಿಶ್ವಾಸದಿಂದ ಆಡಿನ ಹಿಕ್ಕೆ ಲಿಂಗವಾದುದಿಲ್ಲವೆ? ವಿಶ್ವಾಸದಿಂದ ಲಿಂಗವನಪ್ಪಿದ ಹೆಣ್ಣು ಗಂಡಾದುದಿಲ್ಲವೆ? ವಿಶ್ವಾಸದಿಂದ ಓಗರವು ಪ್ರಸಾದವಾಗಿ ಎಂಜಲೆಂದ ವಿಪ್ರರ ಮಂಡೆಯ ಮೇಲೆ ತಳೆಯಲು ಕೆಂಡವಾಗಿ ಸುಟ್ಟುದಿಲ್ಲವೆ ಗ್ರಾಮಸಹಿತವಾಗಿ? ಇದು ಕಾರಣ, ವಿಶ್ವಾಸದಿಂದ ಗುರು; ವಿಶ್ವಾಸದಿಂದ ಲಿಂಗ; ವಿಶ್ವಾಸದಿಂದ ಜಂಗಮ; ವಿಶ್ವಾಸದಿಂದ ಪ್ರಸಾದ. ವಿಶ್ವಾಸಹೀನಂಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪ್ರಸಾದವಿಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.