Index   ವಚನ - 244    Search  
 
ಹೊರಗೆ ಅಗ್ನಿ ಉರಿವುತಿಪ್ಪುದಯ್ಯ. ಕುಂಭದೊಳಗೆ ಉದಕವಿಪ್ಪುದಯ್ಯ. ಅಗ್ನಿಯ ಸಂಪರ್ಕದ ದೆಸೆಯಿಂದ ಕುಂಭದೊಳಗಿರ್ದ ಉದಕವು ಹೇಂಗೆ ಉಷ್ಣವಹುದು ಹಾಂಗೆ ಸರ್ವೇಂದ್ರಿಯವನುಳ್ಳ ಪ್ರಾಣನು ತನ್ನ ಪೂರ್ವಗುಣವನು ಬಿಟ್ಟು ಲಿಂಗಕಳೆಯನೆ ವೇಧಿಸಿ ಪ್ರಾಣವೆ ಲಿಂಗವೆನಿಸಿಕೊಂಡಿತ್ತಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.