Index   ವಚನ - 253    Search  
 
ಮುಖದಲ್ಲಿ ಮಂತ್ರ, ಹೃದಯದಲ್ಲಿ ಧ್ಯಾನ, ಪ್ರಾಣದಲ್ಲಿ ಲಿಂಗ ನೆನಹು ಕರಿಗೊಂಡ ಶಿವಾತ್ಮ ಶರಣನ ಹೃದಯವೆ ಪರಮೇಶ್ವರಂಗೆ ನಿವಾಸಸ್ಥಾನ, ನೆರೆಮನೆಯಾಗಿಪ್ಪುದಯ್ಯ. ಆ ಪರಮೇಶ್ವರನೊಳಗಣ ಸಮರಸ ಭಾವವೆ ಆ ಶರಣಂಗೆ ನಿತ್ಯ ನೇಮ ಪೂಜೆಯಾಗಿಪ್ಪುದಯ್ಯ. ಇದೇ ಪೂರ್ಣ ಶರಣಭಾವ. ಅಲ್ಲಿಯೆ ಲಿಂಗಸಿದ್ಧಿ, ಘನಲಿಂಗ ಪದ ಸ್ಥಿತಿ. ಲಿಂಗಪೂಜೆ. ಮತ್ತಲ್ಲಿಯೆ ನಿಶ್ಚಯವದೇ ಪರಮಾರ್ಥ. ಇದಲ್ಲದೆ ಅನ್ಯವಪ್ಪೆಲ್ಲವು ಆತ್ಮ ಅದುಃಖ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.