Index   ವಚನ - 272    Search  
 
ಆಸುವಳಿದ ಕಾಯದಂತೆ ದೆಸೆಗೆಟ್ಟಿನಯ್ಯ ದೆಸೆಗೆಟ್ಟಿನಯ್ಯ. ಅದೇನು ಕಾರಣವೆಂದಡೆ: ಪಶುಪತಿಯ ಭಕ್ತಿ ವಿಶ್ವಾಸವಿಲ್ಲದೆ ವಿಷಯಾತುರನಾಗಿರ್ದೆನಯ್ಯ. ಇದು ಕಾರಣ, ಎನ್ನ ಸಂಸಾರವಿಷಯಂಗಳ ಮಾಣಿಸಿ ಭಕ್ತನೆಂದೆನಿಸಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.