Index   ವಚನ - 282    Search  
 
ಅಂಗನೆಯ ಚಿತ್ತ, ರಮಣನ ಸುತ್ತಿಮುತ್ತಿ ಅಪ್ಪಿ ಅಗಲದಿಪ್ಪಂತೆ ಜಾಗ್ರ, ಸ್ವಪ್ನ, ಸುಷುಪ್ತಿಯಲ್ಲಿ ಶರಣ ಚಿತ್ತರತಿ ಶಿವಲಿಂಗವ ಸುತ್ತಿ ಮುತ್ತಿ ಅಪ್ಪಿ ಅಗಲದಿಪ್ಪರೆ ಆ ಮಹಾತ್ಮನ ಏನೆಂದುಪಮಿಸುವೆನಯ್ಯ? ಲಿಂಗಪ್ರಾಣಿಯ, ಪ್ರಾಣಲಿಂಗಸಂಬಂಧಿಯ? ಸ್ವತಂತ್ರ ವಸ್ತುವಿನಲ್ಲಿ ಅರಿವರತು ಬೆರಗು ನಿಬ್ಬೆರಗಾದ, ಘನಲಿಂಗಪ್ರಾಣಿಗೆ ನಮೋ ನಮೋಯೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.