Index   ವಚನ - 288    Search  
 
ಗಂಡಿಂಗೆ ಹೆಣ್ಣಲ್ಲದೆ ಹೆಣ್ಣಿಂಗೆ ಹೆಣ್ಣುಂಟೆ ಲೋಕದೊಳಗೆ ಈ ಅರೆಮರುಳ ಶಿವನ ನಾನೇನೆಂಬೆನಯ್ಯ? ಅಪಮಾನವ ಅನ್ಯರಿಗೆ ಕೊಡುವ ದೇವನ ಮರುಳತನವ ನೋಡಾ. ಅದೇನು ಕಾರಣವೆಂದಡೆ: `ಪತಿರ್ಲಿಂಗಸ್ಸತೀ ಚಾಹಮಿತಿಯುಕ್ತಸ್ಸದಾ ತಥಾ ಪಂಚೇಂದ್ರಿಯ ಸುಖಂ ನಾಸ್ತಿ ಶರಣಸ್ಥಲಮುತ್ತಮಂ||' ಎಂದುದಾಗಿ ಮುಕ್ಕಣ್ಣಂಗೆ ನಾ ಹೆಣ್ಣಾದ ಕಾರಣ ಎನ್ನ ಕರಣೋಪಕರಣಗಳೆಲ್ಲವು ಲಿಂಗೋಪಕರಣಂಗಳಾಗಿ ನಿಮ್ಮ ಚರಣವೆ ಹರಣವಾಗಿರ್ದೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.