Index   ವಚನ - 292    Search  
 
ವಂದಿಸಿ ನಿಂದಿಸುವ ಸಂದೇಹಿಯ ಮನೆಯ ಕೂಳು ಹಂದಿಯ ಬಾಯ ತುತ್ತ ನಾಯಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ. ಅದೇನು ಒಡಲ ಉಪಾಧಿಗೆ ತನ್ನ ನಿಂದಿಸಿದುದನರಿಯದೆ ಭಕ್ತನೆಂದು ಒಳಗಿಟ್ಟುಕೊಂಡು ನಡೆವವರನೊಲ್ಲೆ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.