Index   ವಚನ - 301    Search  
 
ಅಗ್ನಿಯೆ ಅಂಗವಾದ ಪ್ರಸಾದಿಯಲ್ಲಿ ಪ್ರಾಣಲಿಂಗ ಶರಣ ಐಕ್ಯ ಭಕ್ತ ಮಾಹೇಶ್ವರನಪ್ಪ ಅಂಗಪಂಚಕವು ಗರ್ಭೀಕೃತವಾಗಿ ಆ ಪ್ರಸಾದಿಯಲ್ಲಿ ಶಿವಲಿಂಗ ಸಂಬಂಧವಾಗಿ ಆ ಶಿವಲಿಂಗದಲ್ಲಿಯೆ, ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗ ಗುರುಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ ಶಿವಲಿಂಗವೆ ಸರ್ವಾಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿ ಬೆರಸಿ ಬೇರಿಲ್ಲದಿರಬಲ್ಲರೆ ಪ್ರಸಾದಿಯೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.