Index   ವಚನ - 303    Search  
 
ಪ್ರಸಾದಿಗೆ ಲಕ್ಷಣವಾವುದೆಂದರೆ ಹೇಳಿಹೆ ಕೇಳಿರಯ ಕಾಯದಿಂದ ಮನಸ್ಸಿನಿಂದ ವಾಕ್ಯದಿಂದ ಸತ್ಯಶುದ್ಧವಾಗಿ, ವಿಶ್ವಾಸ ಶ್ರದ್ಧೆಯೆಡೆಗೊಂಡು ಶರೀರವನು ಪ್ರಾಣವನು ಒಡೆಯೆಂಗೆ ಸಮರ್ಪಿಸಿ ಪ್ರಸಾದವ ಕೈಕೊಳಬಲ್ಲರೆ ಪ್ರಸಾದಿಯೆಂಬೆ. ಹೀಂಗಲ್ಲದೆ ಕುಳವೆಂಬ ಕೋಳಕ್ಕೆ ಸಿಲ್ಕಿದ ಕಾಳ್ವಿಚಾರಿ ಋಣಪಾತಕರ ಪ್ರಸಾದಿ ಸದ್ಭಾವಿಯೆಂತೆಂಬೆನಯ್ಯಾ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.