Index   ವಚನ - 336    Search  
 
ಪಂಚವಿಂಶತಿ ತತ್ವಶ್ರಯವೆಂಬ ಪಟ್ಟಣದೊಳಗೆ ಆರು ಬಣ್ಣದ ಪಕ್ಷಿ ಮೂರು ಗೂಡ ಮಾಡಿಕೊಂಡು ನಾಲ್ಕರಾಹಾರವ ಕೊಂಬುವುದ ಕಂಡೆನಯ್ಯ. ಐದರ ನೀರ ಕುಡಿದು ಪರಿಣಾಮಿಸುತ್ತಿದೆ ನೋಡಾ. ಏಳರ ಮೊಲೆಯನುಂಡು ಎಂಟರಾಭರಣವ ತೊಟ್ಟಿದೆ ನೋಡಾ. ಹತ್ತರ ಬೆಂಬಳಿವಿಡಿದು ಒಂಬತ್ತು ಬಾಗಿಲೊಳಗೆ ನಡೆದಾಡುವದ ಕಂಡೆನಯ್ಯ. ಕೊಂಬುಕೊಂಬಿನಯಿಂಬಿನಲ್ಲಿ ಸುಳಿದಾಡುತ್ತಿದೆ ನೋಡಯ್ಯ. ಆ ಸುಳುಹಿನ ಸೂಕ್ಷ್ಮವ ತಿಳಿದು ತನ್ನ ಸುಳುಹನರಿವ ಹಿರಿಯರಾರನು ಕಾಣೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.