Index   ವಚನ - 339    Search  
 
ಹಾರುವರ ಮನೆಯ ದೇವಿಯ ಹದಿರು ಚದರಿನಲ್ಲಿ ಹಲಬರು ಸಿಕ್ಕಿ ಕೆಟ್ಟರು ನೋಡಾ. ಹಾರುವರ ಕೊಂದು ಹದಿರು ಚದಿರು ಅಳಿದಲ್ಲದೆ ದೇವರ ಕಾಣಬಾರದು, ಪ್ರಾಣಲಿಂಗ ಸಂಬಂಧಿಗಳೆಂಬರೆ, ನಾಚದವರನೇನೆಂಬೆನಯ್ಯ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.