Index   ವಚನ - 443    Search  
 
ಲಿಂಗವೇ ಪತಿಯಾಗಿ ತಾನೆ ಸತಿಯಾಗಿ ಅನ್ಯವನರಿಯದೆ ಪಂಚೇಂದ್ರಿಯರಹಿತನಾಗಿ ತೆರಹಿಲ್ಲದರುಹು ತಾನಾಗಿ ನೆರೆ ಅರುಹಿನೊಳು ನಿಬ್ಬೆರಗಾಗಿ ಹೃದಯ ಕಮಲ ಮಧ್ಯದಲ್ಲಿ ಪರಮೇಶ್ವರನೊಳಗಣ ಸಮರಸ ಸ್ನೇಹವೆರಸಿ ಅಗಲದಿಪ್ಪುದೀಗ ಶರಣಸ್ಥಲವಿದೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.